ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಆಕೆಯನ್ನು ಪೊಲೀಸರು ರಕ್ಷಿಸಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ಹಿನ್ನೆಲೆ:
ಶಿಲ್ಪ ಮತ್ತು ಅಕ್ಕನ ನಡುವೆ ಗಲಾಟೆ ಹಾಗೂ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ 2022 ರಲ್ಲಿ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕೆ ಶಿಲ್ಪ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Also read: ಪಕ್ಷ ನನ್ನನ್ನು ಡಿಸಿಎಂ ಮಾಡಿ ಗೌರವಿಸಿದೆ, ಇನ್ನೇನು ಬೇಕು: ಈಶ್ವರಪ್ಪ ಮನದಾಳದ ಮಾತು
ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post