ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲವು ಪ್ರದೇಶಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ತಾಲೂಕಿನ ಸೀತಾಳಯ್ಯನಗಿರಿ-ಮುಳ್ಳಯನಗಿರಿ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿದೆ. ಪರಿಣಾಮವಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ಅಲ್ಲದೇ, ಅತಿಯಾದ ಮಳೆಯಿಂದಾಗಿ ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಜುಲೈ 22ರವರೆಗೂ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
Also read: ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ | ಪೊಲೀಸ್ ಇಲಾಖೆ ಖಡಕ್ ಸೂಚನೆ
ಸ್ಥಳೀಯ ನಿವಾಸಿಗಳ ವಾಹನಗಳು, ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post