ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಎಲ್ಲ ರೀತಿಯ ಸಮಸ್ಯೆಗಳನ್ನು ಪರಿಹಾರ ಮಾಡಿಕೊಡಲಾಗುವುದು ಎಂದು ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ನಕಲಿ ಜ್ಯೋತಿಷಿಯಲ್ಲಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಫೋನಿನಲ್ಲೇ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡಲಾಗುವುದು ಎಂದು ಪಂಡಿತ್ ಮೋದಿ ಬೆಟ್ಟಪ್ಪ ಆಸ್ಟಾçಲಜಿ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹೀರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಅದರಲ್ಲಿದ್ದ ಫೋನ್ ನಂಬರ್’ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಆ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ 7 ಸಾವಿರ ರೂ. ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.

ಮಹಿಳೆಯ ದೂರನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ 87,500.00 ರೂ. ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್’ಗಳನ್ನು ವಶಪಡಿಸಿಕೊಂಡಿದ್ದಾರೆ.

Also read: ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.











Discussion about this post