ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು/ಬೆಳಗಾವಿ |
ಇಂದು ಮುಂಜಾನೆ ಬೆಳಗಾವಿಯಲ್ಲಿ ನಡೆಸ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಬಿಜೆಪಿ ಎಂಎಲ್’ಸಿ ಸಿ.ಟಿ. ರವಿ #C T Ravi ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ #Lakshmi Hebbalkar Car Accident ಅವರಿಗೆ ಬೆಳಗಾವಿ ಅಧಿವೇಶನ ನಡೆಯುವಾಗ ಸದನದಲ್ಲೇ ಸಿ.ಟಿ. ರವಿ ಅವರು ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೇ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ಅವರನ್ನು ಬಂಧಿಸಿದ್ದ ಪೊಲೀಸರು ಅವರನ್ನು ನಡೆಸಿಕೊಂಡ ರೀತಿ ವ್ಯಾಪಕ ಖಂಡನೆಗೆ ಒಳಗಾಗಿತ್ತು. ಈ ವಿವಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ. ರವಿ ನಡುವೆ ರಾಜಕೀಯ ವೈಷಮ್ಯಕ್ಕೆ ಕಾರಣವಾಗಿದೆ. ಈ ನಡುವೆಯೇ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶೀಘ್ರ ಗುಣಮುಖಕ್ಕೆ ಪ್ರಾರ್ಥಿಸುವ ಮೂಲಕ ರವಿ ಅವರು ತಮ್ಮ ಉತ್ತಮ ಸಂಸ್ಕಾರವನ್ನು ತೆರೆದಿಟ್ಟಿದ್ದಾರೆ.
ಸಚಿವೆ ಕಾರು ಅಪಘಾತ:
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರ ಬೆನ್ನಿನ ಎಲ್1 ಎಲ್4 ಮೂಳೆಗೆ ಬಲವಾದ ಪೆಟ್ಟಾಗಿ, ಮುರಿದಿದೆ ಎಂದು ವರದಿಯಾಗಿದೆ.
Also read: ಲಕ್ಷ್ಮೀ ಹಬ್ಬಾಳ್ಕರ್ ಕಾರು ಅಪಘಾತ | ಸಚಿವರ ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಕಾರು ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸಚಿವೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬಂದ ವೇಳೆ ಸ್ಥಿತಿ ಗಂಭೀರವಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಎಂಆರ್’ಐ ಸ್ಕಾö್ಯನ್ ಮಾಡಲಾಗಿದ್ದು, ಎಲ್1ಎಲ್4 ಮೂಳೆಗೆ ಪೆಟ್ಟಾಗಿದೆ. ಬೆನ್ನಿನ 2 ಮೂಳೆಗಳು ಮುರಿದಿವೆ. ಅವರು 1 ತಿಂಗಳು ಬೆಡ್ ರೆಸ್ಟ್ ಮಾಡಲು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.
ಘಟನೆ ಹೇಗಾಯ್ತು?
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಿಎಲ್’ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿAದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post