ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಬೆಳಗಾವಿಯ ಸುವರ್ಣ ಸೌಧದಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ #Arrest of C T Ravi ಅವರನ್ನು ಬಂಧಿಸಿರುವ ಕ್ರಮವನ್ನು ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್’ಗೆ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರವಿ ಬಂಧನ ವಿರೋಧಿಸಿ ಬಿಜೆಪಿ ಇಂದು ನಗರದ ಬಂದ್’ಗೆ ಕರೆ ನೀಡಿದೆ. ರವಿ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ನಗರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ಪ್ರತಿಕೃತಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.
Also read: ಕೋರ್ಟ್ ಹಾಲ್’ನಲ್ಲಿ ಸಿ.ಟಿ. ರವಿ ಕಣ್ಣೀರು | ರಾತ್ರಿ ಊಟ ಕೊಟ್ಟಿಲ್ಲ, ಮೃಗದ ರೀತಿ ಪೊಲೀಸರ ವರ್ತನೆ | ವಕೀಲರ ವಾದ
ಇನ್ನು, ಬಿಜೆಪಿ ಪ್ರತಿಭಟನೆ #BJP Protest ನಡೆಸುವ ವೇಳೆ ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರೂ ಸಹ ರವಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರು ಮುಖಾಮುಖಿಯಾಗಿದ್ದು, ವಾಗ್ವಾದ ನಡೆದಿದೆ.

ಇನ್ನು, ಘಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತ ಹಾಗೂ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸ್ವತಃ ಡಿಜಿಪಿ ನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post