ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದ ಪರಿಣಾಮ ಪತಿಯೇ ತನ್ನ ಮಗುವಿನ ಎದುರು ಪತ್ನಿಯನ್ನು ಥಳಿಸಿಕೊಂದಿರುವ ಘಟನೆ ಜಿಲ್ಲೆಯ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ.
ಹತ್ಯೆ ನಡೆದ ದಿನವೂ ದಂಪತಿ ನಡುವೆ ತೀವ್ರ ಜಗಳ ನಡೆದಿತ್ತು. ಇದರಿಂದ ಕೋಪಗೊಂಡ ಪತಿ ಮಗುವಿನ ಎದುರೇ ಕಬ್ಬಿಣದ ಪೈಪ್’ನಿಂದ ಮಂಜುಳಾ ಅವರ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಕೃತ್ಯವೆಸಗಿದ ಪತಿಯ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















