ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಲಾಗಿದ್ದ ಪ್ರಕರಣವನ್ನು ಬೇಧಿಸಿರುವ ಜಿಲ್ಲಾ ಪೊಲೀಸರು ಸುಮಾರು 7 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದು, ಮಾಲೀಕರಿಗೆ ಹಿಂದಿರುಗಿಸಿದ್ದಾರೆ.
ಸಿಇಐಆರ್ ಪೋರ್ಟಲ್ ಬಳಸಿ ಪತ್ತೆ ಮಾಡಲಾದ ಸುಮಾರು ರೂ. 7 ಲಕ್ಷ ಮೌಲ್ಯದ 70 ಮೊಬೈಲ್ ಫೋನ್’ಗಳನ್ನು ವಾರಸುದಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಅವರ ಸಮಕ್ಷಮದಲ್ಲಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಾರಸುದಾರರಿಗೆ ಹಿಂದಿರುಗಿಸಿದರು.
ಈ ವೇಳೆ ಮಾತನಾಡಿದ ಎಸ್’ಪಿ ಅವರು, ಒಂದು ವೇಳೆ ನೀವು ನಿಮ್ಮ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ, ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಕೋರಿದೆ.
ಚಿಕ್ಕಮಗಳೂರು ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪಿಐ ಗವಿರಾಜ್, ಪಿಎಸ್’ಐ ರಘುನಾಥ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಅನ್ವರ್ ಪಾಷ ಮತ್ತು ಹರಿಪ್ರಸಾದ್ ರವರ ತಂಡ ಮೊಬೈಲ್ ಫೋನ್’ಗಳನ್ನು ಪತ್ತೆ ಮಾಡಿರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post