ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್’ನಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಸೀಮಾ(6) ಮತ್ತು ರಾಧಿಕಾ(2) ಎಂದು ಗುರುತಿಸಲಾಗಿದೆ.
ಮಧ್ಯ ಪ್ರದೇಶ ಮೂಲದ ಸುನೀತಾ ಎಂಬುವರು ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಲು ಬಂದಿದ್ದರು. ಇವರ ಮಕ್ಕಳೇ ಇವರಿಬ್ಬರು.
ಕೂಲಿ ಕೆಲಸಕ್ಕಾಗಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕಾಫಿ ತೋಟಕ್ಕೆ ಹೋಗಿದ್ದ ತಾಯಿ ಕೂಲಿ ಮುಗಿಸಿ ಮತ್ತೆ ಮನೆಗೆ ಬಂದಾಗ ಮಕ್ಕಳು ನಾಪತ್ತೆಯಾಗಿದ್ದರು.

ತಾಯಿ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋದಾಗ ಆಟವಾಡುತ್ತಾ ಬಾವಿಯ ಬಳಿ ಬಂದು ಆಯ ತಪ್ಪಿ ಪ್ರಾಣ ಕಳೆದು ಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಭೂ ಮಟ್ಟದಿಂದ ಬಾವಿ ಕೇವಲ ಮೂರರಿಂದ ನಾಲ್ಕು ಅಡಿಯಷ್ಟು ನೀರಿನ ಮಟ್ಟ ಇದ್ದು ಕೈಗೆ ತಾಗುತ್ತದೆ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post