ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಲೆನಾಡಿನಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ #Elephant attack ಮತ್ತೋರ್ವ ಕಾರ್ಮಿಕನ ಬಲಿ ಆಗಿದ್ದಾನೆ.
ಹೌದು… ಚಿಕ್ಕಮಗಳೂರು ತಾಲ್ಲೂಕಿನ ದೇವದಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಾವೇರಿ ಮೂಲದ ಯಲ್ಲಪ್ಪ (45) ಮೃತ ದುರ್ದೈವಿ.
ಯಲ್ಲಪ್ಪ ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ಸಮೀಪದ ತಿರುವಳ್ಳಿ ಮೂಲದವರಾಗಿದ್ದು, ಕೂಲಿ ಕೆಲಸ, ಗಾರೆ ಕೆಲಸ ಮಾಡುತ್ತಿದ್ದ ಇವರು ಹುಣಸೇಹಳ್ಳಿ ಸಮೀಪದ ಪುರ ಗ್ರಾಮದ ನಾಗೇಶ್ ಗೌಡರ ತೋಟದ ಮೂಲಕ ಶ್ರೀಧರ್ ಗೌಡ ಅವರ ತೋಟದ ಲೈನ್ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ಪರಿಣಾಮ ಯಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೇ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















