ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯ ನವೋದಯ ವಸತಿ ಶಾಲೆಯಲ್ಲಿ ಎರಡು ದಿನದಲ್ಲಿ 107 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ವಸತಿ ಶಾಲೆಯಲ್ಲಿ ನಿನ್ನೆ 60 ಹಾಗೂ ಇಂದು 35 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಇತ್ತೀಚೆಗೆ ಶಿವಮೊಗ್ಗದಿಂದ ಆಗಮಿಸಿದ ಶಿಕ್ಷಕರೊಬ್ಬರಲ್ಲಿ ಮೊದಲು ಸೋಂಕು ಪತ್ತೆಯಾಗಿತ್ತು ಎಂದು ಹೇಳಲಾಗಿದ್ದು, ಆನಂತರ ಶಾಲೆ ಕೆಲವು ಶಿಕ್ಷಕರು ಇದಕ್ಕೆ ತುತ್ತಾಗಿದ್ದರು. ತದನಂತರ 107 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಈಗಾಗಲೇ 468 ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಸ್ವಾಬ್ ಟೆಸ್ಟ್ ನಡೆಸಲಾಗಿದೆ.
ಇನ್ನು, ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಡಿಎಚ್‌ಒ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ ಎಂದು ವರದಿಯಾಗಿದೆ.
ಅಗತ್ಯವಿರುವ ಔಷಧಿ, ತುರ್ತು ಸೇವೆ, ಆಂಬುಲೆನ್ಸ್’ಗಳನ್ನು ಈಗಾಗಲೇ ಸ್ಥಳದಲ್ಲಿ ನಿಯೋಜಿಸಲಾಗಿದೆ. ಸದ್ಯ ವಸತಿ ಶಾಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post