ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ತಮಿಳುನಾಡು ಮೂಲದ ಕಾರ್ಮಿಕರೊಬ್ಬರು ಚಿಕ್ಕಮಗಳೂರು ಜಿಲ್ಲೆಯ ಕೆಂಚೇನಹಳ್ಳಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಆನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ತಮಿಳುನಾಡು ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ.
ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಹಿತವಾಗಿ ಶ್ರೀಧರ್ ಆಗಮಿಸಿದ್ದರು. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತು. ಆದರೆ ಆಸ್ಪತ್ರೆಯ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
Also read: ನವುಲೆ ಬಳಿ ಬೈಕ್ ಅಪಘಾತ | ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಕೆ.ಆರ್. ಪೇಟೆ, ಕೆಂಚೇನಹಳ್ಳಿ ಸುತ್ತಮುತ್ತ ಓಡಾಡುತ್ತಿರುವ ಒಂಟಿ ಸಲಗ ದಾಳಿ ನಡೆಸಿದೆ ಎನ್ನಲಾಗಿದೆ.
ಕಳೆದ ಎರಡು ವರ್ಷದಲ್ಲಿ ಆನೆ ದಾಳಿಗೆ ಐದಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ ಎಂದು ಇದೇ ವೇಳೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















