ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಚಾರ್ಮಾಡಿ ಘಾಟ್ #Charmadi Ghat ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಮತ್ತೆ ಗುಡ್ಡ ಕುಸಿತವಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುತ್ತಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಆದರೆ, ವಾಹನ ಸಂಚಾರ ಎಂದಿನಂತೆ ಇದ್ದು ಯಾವುದೇ ತೊಂದರೆ ಇಲ್ಲ.
Also read: ಶಾಲಾ ಬಸ್‌ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು: ತಪ್ಪಿದ ಭಾರೀ ಅನಾಹುತ
ಚಾರ್ಮಾಡಿ ಘಾಟ್ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುತ್ತದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post