ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ರಾಜ್ಯದ ಜನ ಜಾಗೃತರಾಗಿದ್ದು, ರಾಜಕೀಯ ಬಲ್ಲವರಾಗಿದ್ದಾರೆ. ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದರು.

Also read: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗದ ಎಲ್ಲಾ ಕ್ಷೇತ್ರಗಳೂ ಬಿಜೆಪಿ ತೆಕ್ಕೆಗೆ: ಸಿಎಂ ಬೊಮ್ಮಾಯಿ
ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಜನಬೆಂಬಲ :
ಮಲೆನಾಡು ಪ್ರದೇಶದಿಂದ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆಯ ಮೂರನೇ ಚರಣವನ್ನು ಪ್ರಾರಂಭಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಕಲ್ಪ ಯಾತ್ರೆ ಕೈಗೊಳ್ಳುವುದು ನಮ್ಮ ಪಕ್ಷದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದೆ. ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದ ನಂತರ ಈಗ ಮಲೆನಾಡು ಭಾಗದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಈ ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ ಎಂಬುದು ನಮ್ಮ ವಿಶ್ವಾಸವಾಗಿದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post