ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು/ಕೊಡಗು |
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಭರ್ಜರಿ ಪ್ರಚಾರ ನಡೆಸಿದರು.
ಚಿಕ್ಕಮಗಳೂರು ಪ್ರಚಾರ:
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸುರುಚಿ ಹೋಟೆಲ್ ಸಭಾಂಗಣದಲ್ಲಿ ಮತದಾರರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.
ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಮತದಾರರನ್ನು ಭೇಟಿ ಮಾಡಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ ಮಾಡಿ ಎಂದು ಸೂಚನೆ ನೀಡಿದರು.
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ರಾಜ್ಯ ರೈತ ಮೋರ್ಚಾದ ಮಾದಪ್ಪ, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು
ತರೀಕೆರೆ ಮಂಡಲದ ವತಿಯಿಂದ ಇಲ್ಲಿನ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಚುನಾವಣಾ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ತರೀಕೆರೆ ಮಂಡಲದ ಬಿಜೆಪಿ ವಾರ್ಡ್ ಅಧ್ಯಕ್ಷರು , ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣೆಯ ರೂಪುರೇಷೆಗಳನ್ನು ತಿಳಿಸಿ ತಮ್ಮ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳಲ್ಲಿ ಪದವೀಧರ ಮತದಾರರನ್ನು ತಲುಪಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಪರವಾಗಿ ಮತಯಾಚಿಸಿ, ಗೆಲ್ಲಿಸುವಂತೆ ಮನವಿ ಮಾಡಲಾಯಿತು.
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ಮಾಜಿ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಎಸ್. ಸುರೇಶ್, ತರೀಕೆರೆ ಮಂಡಲ ಅಧ್ಯಕ್ಷರಾದ ಪ್ರತಾಪ್ , ಮಾಜಿ ಶಾಸಕರಾದ ಎಸ್. ಎಂ. ನಾಗರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷರಾದ ನರೇಂದ್ರ, ಬಿಜೆಪಿ ಮುಖಂಡರಾದ ಧ್ರುವಕುಮಾರ್, ಕೆ. ಆನಂದಪ್ಪ, ಎ.ಸಿ. ಚಂದ್ರಪ್ಪ, ಮಂಜುನಾಥ್, ಜೆಡಿಎಸ್ ಮುಖಂಡರಾದ ಶಿವಾನಂದ, ಪದವೀಧರ ಕ್ಷೇತ್ರದ ತಾಲೂಕು ಸಂಚಾಲಕರಾದ ಶಶಿಕುಮಾರ್, ಶಿಕ್ಷಕರ ಕ್ಷೇತ್ರದ ತಾಲೂಕು ಸಂಚಾಲಕರಾದ ಸೋಮಶೇಖರ್, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಆನಂದಪ್ಪ, ಬಿಜೆಪಿ ಮಾಜಿ ಜಿಲ್ಲಾ ಕಾರ್ಯದರ್ಶಿಗಳಾದ ಅವಿನಾಶ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಚ್. ಮಹೇಂದ್ರ, ಜಿಲ್ಲಾ ಕಾರ್ಯದರ್ಶಿಗಳಾದ ವಸಂತ್ ಕುರ್ಮಾ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ವರಿ , ಬಿಜೆಪಿ ಮುಖಂಡರಾದ ಕೃಷ್ಣ ಮೂರ್ತಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚೈತ್ರಶ್ರೀ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಕೊಡಗು (ಮೂಡಿಗೆರೆ):
ಮೂಡಿಗೆರೆ ಮಂಡಲದ ವತಿಯಿಂದ ಮೂಡಿಗೆರೆ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ , ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್ ದತ್ತಾತ್ರಿ , ಮಾಜಿ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೆ.ಸಿ. ರತನ್ ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post