ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಮಗಳೂರು: ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸ್ಪೂರ್ತಿ ಸೇವಾ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಭೋಧಕ ಆಸ್ಪತ್ರೆ ರಕ್ತನಿಧಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಒಂದು ದಿನದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಘ ಅವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಅವರು ಪಿಎಸ್‌ಐ ಮೇಘ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಕ್ತದಾನಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದರು. ಶಿಬಿರದಲ್ಲಿ 80ಕ್ಕೂ ಅಧಿಕ ಮಂದಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದು, ಮಹಿಳೆಯರು ಮತ್ತು ಹಿರಿಯರು ಹೆಚ್ಚಾಗಿ ರಕ್ತದಾನ ಮಾಡಿದ್ದು ವಿಶೇಷತೆಯಾಗಿತ್ತು. ಶಿಬಿರಕ್ಕೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್ ಕುಮಾರ್ ಹಾಗೂ ಸ್ಪೂರ್ತಿ ಸೇವಾ ಸಂಸ್ಥೆಯ ಎಲ್ಲಾ ಕಾರ್ಯಕರ್ತರು ಉಪಸ್ಥಿತಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post