ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಲೋಕಸಭಾ ಚುನಾವಣೆ #ParliamentElection ಘೋಷಣೆಗೂ ಮುನ್ನವೇ ಚುರುಕಾಗಿ ತನ್ನ ಜವಾಬ್ದಾರಿ ನಿರ್ವಹಿಸಲು ಪಣತೊಟ್ಟಿರುವ ಜಿಲ್ಲಾಡಳಿತ ಇದಕ್ಕಾಗಿ ನಿರಂತರವಾಗಿ ಕಾರ್ಯಪ್ರವೃತ್ತವಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಪಣತೊಟ್ಟಿದೆ.

ತಾಲೂಕಿನ ಬಸ್ಕಲ್, ಕಸ್ಕೆಬೈಲು, ಕೊಲ್ಲಿಬೈಲು, ಕಿರಗುಂದ ಮತ್ತು ಕೊಟ್ಟಿಗೆಹಾರ ಗ್ರಾಮಗಳಿಗೆ ಹಾಗೂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿರುವ ಮಾಗಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಅಧಿಕಾರಿಗಳ ತಂಡ ಎರಡೂ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮೂಡಿಗೆರೆ ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿರುವ ಬಿಳಗುಳ, ಅಂಡಛತ್ರ, ಉಪ್ಪಳ್ಳಿ, ವಿಜಯಪುರದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post