ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಡ್ರಗ್ಸ್ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಗಾಂಜಾ ಮಾರುತ್ತಿದ್ದ ಓರ್ವನನ್ನು ಮಾಲು ಸಹಿತವಾಗಿ ಬಂಧಿಸಿದ್ದಾರೆ.
ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿ ಆತನಿಂದ ಒಂದು 1.1 ಕೆಜಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್ ಠಾಣೆಯ ಪಿಐ ಎನ್.ಎಸ್. ಜಯರಾಮ್, ಸಿಬ್ಬಂದಿಗಳಾದ ನವೀನ, ರವೀಶ, ತಿಮ್ಮಪ್ಪ, ಪ್ರದೀಪ, ನಂಜಪ್ಪ ಮತ್ತು ಯುವರಾಜ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Also read: ನೈಜೀರಿಯಾದ ರೂಢಿಗತ ಡ್ರಗ್ ಪೆಡ್ಲರ್ ಬಂಧನ: 20ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ
ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















