ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಭಾರೀ ಮಳೆಯ #Heavy rain ಪರಿಣಾಮ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಹಲವು ಗಿರಿ ಪ್ರದೇಶಗಳಿಗೆ ನಿಷೇಧ ಹೇರಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿದೆ. ಇದರೊಂದಿಗೆ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ #Seethalaiahyanagiri-Mullaiahyanagiri ಹೋಗುವ ರಸ್ತೆಗಳಲ್ಲಿ ದಿನಾಂಕ ಜುಲೈ 31ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
Also read: ಕಾಲದ ಕಣ್ಣು ತೆರೆಯುವಂತಾದರೆ ಜೀವನ ಸುಗಮ: ರಾಘವೇಶ್ವರ ಶ್ರೀ
ಸ್ಥಳೀಯ ನಿವಾಸಿಗಳ ವಾಹನಗಳು, ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post