ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ನಗರದ ಮೂರು ಕಡೆ ಪರವಾನಗಿ ಇಲ್ಲದೇ ಸಂಗ್ರಹಿಸಿದ್ದ ಭಾರೀ ಮೌಲ್ಯದ ಪಟಾಕಿಯನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಕಂದಾಯ, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಪರವಾನಗಿ ಇಲ್ಲದೇ ಮೂರು ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಅಕ್ರಮವಾಗಿ ಶೇಖರಿಸಿಟ್ಟಿದ್ದ ರೂ. 7.6 ಲಕ್ಷ ಮೌಲ್ಯದ 1700 ಕೆಜಿ ಪಟಾಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
Also read: ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿ ಅತ್ಯಾಚಾರಕ್ಕೆ ಕಾರಣ | ಹತ್ತು ಮಂದಿ ಬಂಧನ
ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post