ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು/ ಮಡಿಕೇರಿ |
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬೆನ್ನಲ್ಲೇ ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಕರ್ತರಿಗೆ ಶಾಕ್ ನೀಡಿದ್ದಾರೆ.
ಮಡಿಕೇರಿಯ ಮಹದೇವ ಪೇಟೆಯಲ್ಲಿರುವ ಪಿಎಫ್’ಐ ಕಚೇರಿ ಮೇಲೆ ನಿನ್ನೆ ರಾತ್ರಿ ದಾಳಿ ನಡೆಸಿರುವ ಪೊಲೀಸರು, ಅಲ್ಲಿರುವ ದಾಖಲೆಗಳನ್ನು ವಶಕ್ಕೆ ಪಡೆದು, ಕಚೇರಿಗೆ ಬೀಗ ಹಾಕಿ, ಸೀಜ್ ಮಾಡಿದ್ದಾರೆ.
ಇನ್ನು, ಚಿಕ್ಕಮಗಳೂರಿನ ಆಲ್ದೂರಿನಲ್ಲಿರುವ ಆರೀಫ್ ನಿವಾಸದ ಮೇಲೆ ಜಿಲ್ಲಾಧಿಕಾರಿಗಳ ಸರ್ಚ್ ವಾರೆಂಟ್ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪಿಎಫ್’ಐ ಜಿಲ್ಲಾಧ್ಯಕ್ಷ ಚಾಂದ್ ಪಾಷಾ ಹಾಗೂ ಎಸ್’ಡಿಪಿಐ ಮುಖಂಡ ಗೌಸ್ ನಿವಾಸದ ಮೇಲೂ ಸಹ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.
Also read: ವಸತಿ ಯೋಜನೆ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ: ಶಾಸಕ ಈಶ್ವರಪ್ಪ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















