ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಭದ್ರಾ ನದಿಗೆ ಬಿದ್ದ ಪರಿಣಾಮ ಯುವಕನೊಬ್ಬ ಸಾವನ್ನಪಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕೊಲಮಾ ಗ್ರಾಮದ ಬಳಿ ನಡೆದಿದೆ.
ಗಣಪತಿಕಟ್ಟೆ ನಿವಾಸಿ ಶಮಂತ್ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಿಕಪ್ ಸಮೇತ ನದಿಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ.
ಚಾಲಕ ಶಮಂತ್ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಿಯುತ್ತಿರುವ ಮಳೆಯಿಂದ ಕಾರ್ಯಾಚರಣೆಗೂ ತೊಂದರೆಯುಂಟಾಗಿದೆ. ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post