ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಜಿಲ್ಲೆಯಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ #Heavy Rain ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಒಂದು ವಾರಗಳ ಕಾಲ ಪ್ರವಾಸ ಮುಂದೂಡುವಂತೆ ಸೂಚನೆ ನೀಡಲಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಭಾರೀ ಮಳೆಯ ಹಿನ್ನೆಲೆ, ಈ ಭಾಗದ ಪ್ರವಾಸಿ ತಾಣಗಳಿಗೆ #Tourism Place ಬರುವ ವಿವಿಧ ಭಾಗಗಳ ಪ್ರವಾಸಿಗರಿಗೆ ಒಂದು ವಾರಗಳ ಕಾಲ ಪ್ರವಾಸ ಮುಂದೂಡುವಂತೆ ಹೇಳಿದೆ.
ಮಳೆಯ ಅಬ್ಬರಕ್ಕೆ ಕಾಫಿನಾಡಿನ ಜನ ಕಂಗಾಲಾಗಿದ್ದಾರೆ. ಇದರ ನಡುವೆ ಮಳೆ ಅಬ್ಬರಕ್ಕೆ ಮತ್ತೆ ಬೆಟ್ಟ-ಗುಡ್ಡ-ಧರೆ ಕುಸಿಯುವ ಭೀತಿಯಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ #Tourist ಒಂದು ವಾರ ಪ್ರವಾಸ ಮುಂದೂಡುವಂತೆ ಸೂಚಿಸಿದೆ.
Also read: ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ ಗಣ್ಯ ಪೂಜಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಭೂಕುಸಿತ ಸಹ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೂ ಜಿಲ್ಲಾ ಪ್ರವಾಸವನ್ನು ಕೈಗೊಳ್ಳದಂತೆ ಸೂಚನೆ ನೀಡಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸುವಂತೆ ಜನರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ಸ್ವಚ್ಚಗೊಳಿಸಲು ಹಳ್ಳಿ, ಕೆರೆಕಟ್ಟೆಗಳಿಗೆ ತೆರಳದಂತೆ, ಮಳೆಯಿಂದ ಧರೆ, ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿAದ ಚಾರಣಿಗರು ಹಾಗೂ ಹೋಂಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಒಂದು ವಾರ ಸ್ಥಗಿತಗೊಳಿಸುವಂತೆ ಸೂಚಿಸಿದೆ.
ಮಳೆಯಿಂದ ಏಕಾಏಕಿ ಹಳ್ಳಗಳು ಬರ್ತಿಯಾಗುತ್ತಿವೆ. ರಸ್ತೆಗಳು ಜಲಾವೃತವಾಗುತ್ತಿವೆ. ಅವಾಂತರಗಳಾಗುವ ಆತಂಕದಿAದ ಜಿಲ್ಲಾಡಳಿತ ಪ್ರವಾಸಿಗರಿಗೆ ಈ ಸೂಚನೆ ನೀಡಿದೆ.
ಈಗಾಗಲೇ ಜಿಲ್ಲೆಯಾದ್ಯಂತ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಮಾಡಿಸಿದ ಸರ್ವೆಯಲ್ಲಿ ಜಿಲ್ಲೆಯ 88 ಸ್ಥಳಗಳನ್ನ ಡೇಂಜರ್ ಸ್ಪಾಟ್ ಎಂದು ಗುರುತಿಸಲಾಗಿದೆ. ಅದರಲ್ಲಿ ಕರ್ನಾಟಕದ ಎವರ್ ಗ್ರೀನ್ ಟೂರಿಸ್ಟ್ ಸ್ಪಾಟ್ ಮುಳ್ಳಯ್ಯನಗಿರಿ ಪ್ರದೇಶ ಹಾಗೂ ಕೆಲ ಟ್ರಕ್ಕಿಂಗ್ ಸ್ಪಾಟ್’ಗಳೂ ಇವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post