ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ನಸುಕಿನಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ 7 ಮಂದಿ ಪಿಎಫ್’ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಎನ್’ಐಎ ನೀಡಿರುವ ಮಾಹಿತಿ ಹಾಗೂ ಮಾರ್ಗದರ್ಶನದ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಚಿಕ್ಕಮಗಳೂರಿನಲ್ಲಿ ಮೂವರು ಹಾಗೂ ಆಲ್ದೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತದೆ ಎನ್ನಲಾಗಿದೆ.
ಎನ್’ಐಎ ದಾಳಿ ಖಂಡಿಸಿ ಕೇರಳ ಮಾದರಿಯಲ್ಲಿ ಹಿಂಸಾಚಾರ ನಡೆಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
Also read: ಶಿವಮೊಗ್ಗ-ಭದ್ರಾವತಿಯಲ್ಲಿ ಪಿಎಫ್’ಐ ಕಾರ್ಯಕರ್ತರ ಮನೆ ಮೇಲೆ ದಾಳಿ: ಐವರ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post