ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಇಂದಿನಿಂದ ಆರಂಭವಾದ ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ (ಚಿಕ್ಕಮಗಳೂರು ಹಬ್ಬ) ನಡೆಯುತ್ತಿರುವ ಕೃಷಿ, ತೋಟಗಾರಿಕೆ ಆಹಾರ ಧಾನ್ಯಗಳ ಮೇಳದಲ್ಲಿ ರಾಶಿ ಮಾಡಿರುವ ದವಸ ಧಾನ್ಯಗಳ ಕಣವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ (ಬೈರತಿ), ಕೇಂದ್ರದ ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ, ಜಿಲ್ಲಾಧಿಕಾರಿ ಹೆಚ್.ಎನ್. ರಮೇಶ್, ಜಿಲ್ಲಾ ಪಂಚಾಯತ ಸಿಇಒ, ಕೃಷಿ ತಜ್ಞರು ಸೇರಿದಂತೆ ಜಿಲ್ಲೆಯ ಅನೇಕ ಗಣ್ಯರು ಉಪಸ್ಥಿತರಿದ್ದರು.
ಶಾಸಕ ಸಿ.ಟಿ.ರವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















