ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಸಾವರ್ಕರ್ ವಿಚಾರದಲ್ಲಿ ವಿರೋಧಿ ಹೇಳಿಕೆ ನೀಡಿರುವ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಈಗ ಹೋದ ಕಡೆಯಲ್ಲೆಲ್ಲಾ ಭಾರೀ ಪ್ರತಿಭಟನೆಯ ಸ್ವಾಗತ ಎದುರಾಗುತ್ತಿದೆ.
ಹೌದು… ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ Siddaramaiah ಕಾರಿನ ಮೇಲೆ ಮೊಟ್ಟೆ ಹೊಡೆದು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಇಂದು ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ವಿರೋಧದ ಬಿಸಿ ಅವರಿಗೆ ತಟ್ಟಿದೆ.

ಇನ್ನು, ನಿನ್ನೆ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಹೊಡೆದ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಿದ್ಧರಾಮಯ್ಯ ಅವರಿಗೆ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.











Discussion about this post