ಕಲ್ಪ ಮೀಡಿಯಾ ಹೌಸ್
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ಕಗ್ಗನಹಳ್ಳ ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಪಡೀಲ್‌ನ ನಿವಾಸಿಯಾದ ಜಾನಕಿ (55) ಮೃತ ದುರ್ದೈವಿ ಎನ್ನಲಾಗಿದ್ದು, ಜುಲೈ 11ರಂದು ನಡೆದುಕೊಂಡು ಹೋಗುವಾಗ ಆಯತಪ್ಪಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮರುದಿನ 12 ಗಂಟೆವರೆಗೆ ಹುಡುಕಾಟ ನಡೆಸಿದ ಕುಟುಂಬಸ್ಥರು, ಮೃತದೇಹ ಸಿಗದ ಹಿನ್ನೆಲೆಯಲ್ಲಿ ಸ್ಥಳೀಯ ಮುಳುಗು ತಜ್ಞ ಭಾಸ್ಕರ್ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸದಸ್ಯರಿಗೆ ಮಾಹಿತಿ ನೀಡಿದರು. ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪರಿಣಾಮ ಮಹಿಳೆಯ ಮೃತ ದೇಹ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post