ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಸಾಕಷ್ಟು ಸಮಸ್ಯೆಗಳನ್ನು ಭಾರತೀಯ ಜನತಾ ಪಕ್ಷ ಬಗೆಹರಿಸುವಲ್ಲಿ ಬದ್ಧತೆಯನ್ನು ತೋರಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನೈರುತ್ಯ ಪಧವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಈಗಾಗಲೇ ಪದವೀಧರರ ನೋಂದಣಿ ಮುಗಿದಿದ್ದು, ಈಗೇನಿದ್ದರೂ ಪ್ರತಿ ಪದವೀಧರ ಮತದಾರನ್ನು ಬೂತ್ ಮಟ್ಟದಲ್ಲಿ ತಲುಪುವ ಕೆಲಸವಾಗಬೇಕು, ಎಲ್ಲರ ಸಹಕಾರದಿಂದ ಗೆಲುವು ಸಾಧ್ಯವಾಗಲಿದೆ, ಜೂನ್ 3 ರಂದು ಚುನಾವಣೆ ನಡೆಯಲಿದ್ದು, ನಮ್ಮ ಕಾರ್ಯವ್ಯಾಪ್ತಿ ಚುರುಕುಗೊಳ್ಳಬೇಕಿದೆ, ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು.
Also read: ತಾವೇಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ? ಮಿಲಿಯನ್ ಡಾಲರ್ ಪ್ರಶ್ನೆಗೆ ಮೋದಿ ಕೊಟ್ಟ ಉತ್ತರ ಏನು?
ಡಾ. ಧನಂಜಯ ಸರ್ಜಿ #Dr. Dhananjaya Sarji ಅವರಿಗೆ ಸೇವಾನೋಭಾವನೆಯೊಂದಿಗೆ ಅನೇಕ ಸಂಘ-ಸಂಸ್ಥೆಗಳೊಡಗೂಡಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದಾರೆ, ಅದರಲ್ಲೂ ನಿರಂತರ ಪರಿಶ್ರಮ ಹಾಗೂ ಉತ್ತಮ ಸೇವೆಯೊಂದಿಗೆ ಶಿವಮೊಗ್ಗದಲ್ಲಿ ಏಳು ಆಸ್ಪತ್ರೆಗಳನ್ನು ನಿರ್ಮಿಸಿ ಸೇವೆ ಸಲ್ಲಿಸುವ ಮೂಲಕ ಮಲೆನಾಡಿನ ಮನೆ ಮಾತಾಗಿದ್ದಾರೆ, ಅದರಲ್ಲೂ ಖಾಸಗಿ ಆಸ್ಪತ್ರೆಯ ವೈದ್ಯರಾಗಿ ಅನಿವಾರ್ಯ ಸಂದರ್ಭಗಳಲ್ಲಿ ಸರಕಾರಿ ಆಸ್ಪತ್ರೆಗೆ ಹೋಗಿ ಸೇವೆ ಸಲ್ಲಿಸಿರುವುದು ಅವರ ಸೇವಾ ಮನೋಭಾವ ಹಾಗೂ ಮಾನವೀಯ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ ಎಂದರು.
ನೈರುತ್ಯ ಪಧವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಪ್ರತಿ ಕಾರ್ಯಕರ್ತರೇ ಬಿಜೆಪಿ ಪಕ್ಷದ ಶಕ್ತಿ, ನಮ್ಮ ದೇಶದ ಭದ್ರತೆಗಾಗಿ, ಅಭಿವೃದ್ಧಿಗಾಗಿ, ದೇಶದ ಗೌರವ ಹೆಚ್ಚಿಸುವುದಕ್ಕಾಗಿ ಎಲ್ಲರ ಕಾರ್ಯಕರ್ತರು ಶ್ರಮಿಸಿ, ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸವಿತಾ ರಮೇಶ್, ಪದವೀಧರ ಕ್ಷೇತ್ರದ ಜಿಲ್ಲಾ ಸಂಚಾಲಕರಾದ ಪ್ರೇಮ್ ಕುಮಾರ್, ಶಿಕ್ಷಕರ ಕ್ಷೇತ್ರದ ಜಿಲ್ಲಾ ಸಂಚಾಲಕರಾದ ಪುಟ್ಟೇಗೌಡ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ನರೇಂದ್ರ ಜಿ, ಬೆಳವಾಡಿ ರವೀಂದ್ರ, ಪುಣ್ಯಪ್ರಾಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post