ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ. ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ‘ಪ್ರೊಡಕ್ಷನ್ ನಂ 1‘ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಪುರಾಣ ಪ್ರಸಿದ್ದ ಶ್ರೀಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ನೆರವೇರಿತು.
ಶ್ರೀಮತಿ ಲಕ್ಷ್ಮೀದೇವಮ್ಮ ಶಕ್ತಿಪ್ರಸಾದ್ ಅವರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಉಮೇಶ್ ಗುಪ್ತ ಅವರು ಆರಂಭ ಫಲಕ ತೋರಿದರು. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕ್ಯಾಮೆರಾ ಚಾಲನೆ ಮಾಡಿದರು.
ಆರ್. ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಎಚ್.ಸಿ. ವೇಣು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರಾಗ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಕ್ಷತ, ಅಮೃತ, ತಾರಾ, ದಿನೇಶ್ ಮಂಗಳೂರು, ಸಾಧುಕೋಕಿಲ, ತರಂಗ ವಿಶ್ವ ಮುಂತಾದವರಿದ್ದಾರೆ.
Discussion about this post