ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಡ್ಡ ಬಂದ ನಾಯಿಯನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್’ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಚಿಕ್ಕಬೆನ್ನೂರು ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರು ವೇಗವಾಗಿ ಸಾಗುವ ವೇಳೆ ನಾಯಿ ಅಡ್ಡ ಬಂದಿದೆ. ಈ ವೇಳೆ ಇದನ್ನು ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.
ಮೃತರನ್ನು ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post