ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಜಿಲ್ಲೆಯ ಹೊಸದುರ್ಗದ ಮನೆಯೊಂದರಲ್ಲಿ ಇಬ್ಬರು ವೃದ್ಧ ದಂಪತಿಯನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಇಲ್ಲಿನ ವಿನಾಯಕ ಬಡಾವಣೆಯಲ್ಲಿ ವಾಸವಿದ್ದ ವೃದ್ಧ ದಂಪತಿಯನ್ನು ಬೇರೆ ಯಾರೂ ಇಲ್ಲದ ವೇಳೆ ಕತ್ತು ಸೀಳಿ, ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ.
ಮೃತ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟು, ಹೊಸದುರ್ಗದಲ್ಲಿ ಇಬ್ಬರೇ ವಾಸವಾಗಿದ್ದರು. ವೈಯುಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ, ನಿಖರ ಕಾರಣ ತಿಳಿದುಬಂದಿಲ್ಲ.
Also read: ಮಾಜಿ ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲು: ಇಷ್ಟಕ್ಕೂ ಏನಾಯಿತು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post