ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್’ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಬಳೆಕಟ್ಟೆ ಬಳಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸರೋಜಮ್ಮ(52) ಎಂದು ಗುರುತಿಸಲಾಗಿದೆ.
Also read: ತುಮಕೂರು | ಜಾತ್ರೆಯಲ್ಲಿ ಊಟ ಸೇವಿಸಿದ ಮೂರು ಮಹಿಳೆಯರು ಸಾವು, ಹಲವರು ಅಸ್ವಸ್ಥ
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್’ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಶಿವಬಸಮ್ಮ ಮೃತಪಟ್ಟಿದ್ದು, ಆ್ಯಂಬುಲೆನ್ಸ್’ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post