ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
2ನೆಯ ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದು, ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
2ನೆಯ ಪೋಕ್ಸೋ ಪ್ರಕರಣದ ಎ1 ಆರೋಪಿಯಾಗಿರುವ ಮುರುಘಾಶ್ರೀಗಳನ್ನು Murugha Shri ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು, ದಾವಣಗೆರೆಯ ವಿರಕ್ತ ಮಠದಲ್ಲಿ ವಶಕ್ಕೆ ಪಡೆದು, ಚಿತ್ರದುರ್ಗಕ್ಕೆ ಕರೆ ತರುತ್ತಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಐ ಮುದ್ದುರಾಜ್, ಪಿಎಸ್’ಐ ಶಿವಕುಮಾರ್ ಅವರ ನೇತೃತ್ವದ ತಂಡ ಮುರುಘಾ ಶ್ರೀಗಳನ್ನು ಬಂಧಿಸಿದ್ದು, ಚಿತ್ರದುರ್ಗಕ್ಕೆ ಕರೆ ತರುತ್ತಿದ್ದಾರೆ. ಇಂದು ಸಂಜೆಯ ಒಳಗಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post