ಕಲ್ಪ ಮೀಡಿಯಾ ಹೌಸ್
ಹಿರಿಯೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಜನರು ನಿಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಈ ಹೋರಾಟಕ್ಕೆ ಎಲ್ಲರೂ ಕೈಜೋಡಿಸುವ ಮೂಲಕ ಕೊರೊನಾ ವಿರುದ್ಧದ ಸಮರಕ್ಕೆ ಸಹಕರಿಸಬೇಕು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದಲ್ಲಿ ನಗರಸಭೆ ವತಿಯಿಂದ ಕೊರೋನಾ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಾಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ಪೋಲೀಸ್ ಇಲಾಖೆ ಹಾಗೂ ನಗರಸಭೆ ವತಿಯಿಂದ ಕೊರೊನಾ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡವನ್ನು ವಿಧಿಸಲಾಗುತ್ತಿದ್ದು, ಇದು ಸಾರ್ವಜನಿಕರ ಸುರಕ್ಷತೆಗಾಗಿಯೇ ಹೊರತು ಜನರನ್ನು ಹಿಂಸಿಸುವ ಯಾವುದೇ ಉದ್ದೇಶ ಇಲಾಖೆಯವರಿಗೆ ಇಲ್ಲ ಎಂಬುದಾಗಿ ಶಾಸಕರು ಸಾರ್ವಜನಿಕರಿಗೆ ಸ್ಪಷ್ಠಪಡಿಸಿದರು.
ಈ ಕೊರೊನಾ ರೋಗ ನಿಯತ್ರಿಸಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಸರ್ಕಾರದ ಜೊತೆ ಕೈಜೊಡಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಶಂಶುನ್ನೀಸಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜೇಶ್ವರಿ, ನಗರಸಭೆ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್ ಯಾದವ್, ಪೌರಾಯುಕ್ತೆ ಟಿ.ಲೀಲಾವತಿ, ಟಿಹೆಚ್‌ಓ ಡಾ.ವೆಂಕಟೇಶ್, ಬಿಜೆಪಿ ಮುಖಂಡರಾದ ಕೇಶವಮೂರ್ತಿ, ಕಂದಾಯ ಅಧಿಕಾರಿ ಜಯಣ್ಣ, ನಗರಸಭೆ ಸದಸ್ಯರಾದ ಶಿವರಂಜಿನಿ ಯಾದವ್, ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ಅನೇಕ ಯುವ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post