ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಕೊರೋನಾ, ಬ್ಲಾಕ್, ವೈಟ್, ಯೆಲ್ಲೋ ಫಂಗಸ್’ಗಳು ಕಾಡುತ್ತಿರುವ ಜೊತೆಯಲ್ಲೇ ಇದೀಗ ದೇಶದಲ್ಲೇ ಮೊಟ್ಟಮೊದಲ ಬಾರಿಗೆ ನಗರದ ವ್ಯಕ್ತಿಯೊಬ್ಬರಲ್ಲಿ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್19ಗೆ ಚಿಕಿತ್ಸೆ ಪಡೆದಿದ್ದ ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗ್ರಾಮದ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಗುಣಮುಖರಾದ ಒಂದು ತಿಂಗಳ ಬಳಿಕ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಪ್ರತಿದಿನ ಮಾಸ್ಕ್ ಧರಿಸಿ ಗಾಯವಾಗಿರುವ ಪರಿಣಾಮ, ಅವರ ಕಿವಿ ಭಾಗದಲ್ಲಿ ಬ್ಲಾಕ್ ಫಂಗಸ್ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಕಾರಣವೇನು?
ಇನ್ನು, ಚರ್ಮ ಬ್ಲಾಕ್ ಫಂಗಸ್ ಪತ್ತೆಯಾಗಿರುವ ವ್ಯಕ್ತಿ ಹೆಚ್ಚು ಸ್ಟಿರಾಯ್ಡ್ ಬಳಸಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದ್ದು, ನಿಖರ ಕಾರಣ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post