ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ Challakere MLA Raghumurthy ಅವರು ಪ್ರಯಾಣಿಸುತ್ತಿದ್ದ ಕಾರು ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದ ಹೊರವಲಯದಲ್ಲಿ ಅಪಘಾತವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮೇ 24ರಂದು ರಾತ್ರಿ ಚಳ್ಳಕೆರೆಯಿಂದ ಮಸ್ಕಲ್ ಟಿ.ಬಿ. ಗೊಲ್ಲರಹಟ್ಟಿಯ ಸಂಬಂಧಿಕರ ಮನೆಗೆ ಹೋಗುತ್ತಿದ್ದ ಶಾಸಕ ರಘುಮೂರ್ತಿ ಅವರ ಕಾರಿಗೆ, ಮಸ್ಕಲ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಅಪಘಾತದ ರಭಸಕ್ಕೆ ಶಾಸಕರ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತಂಕ ಬೇಡ ಸುರಕ್ಷಿತರಾಗಿದ್ದೇವೆ:
ಶಾಸಕ ಟಿ ರಘುಮೂರ್ತಿ ಕ್ಷೇತ್ರದ ಜನತೆಯೊಂದಿಗೆ ಮಾತನಾಡಿ, ನಾವು ಸುರಕ್ಷಿತವಾಗಿದ್ದೇವೆ ಆದ್ದರಿಂದ ಯಾರೂ ಆತಂಕ ಪಡಬೇಡಿ ಎಂದು ಮನವಿ ಮಾಡಿದರು.
Also read: ಕೋವಿಡ್ ಸಂಕಷ್ಟದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸರ್ವಥಾ ಮನನೀಯ: ಸಂಸದ ರಾಘವೇಂದ್ರ ಶ್ಲಾಘನೆ
ವಿಶೇಷ ಪೂಜೆ ಸಲ್ಲಿಕೆ:
ಇಂದು ಶಾಸಕರ ಭವನದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ನಂತರ ಕುಟುಂಬದೊಂದಿಗೆ ವೀರಭದ್ರ ಸ್ವಾಮಿ ದೇವಸ್ಥಾನ ಹಾಗೂ ಚಳ್ಳಕೆರೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಸುಮ, ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರನಾಯಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶ್ ಗೌಡ ಹಾಗೂ ರಾಜಸ್ವನಿರೀಕ್ಷಕ ಲಿಂಗೇಗೌಡ, ನೌಕರರ ಸಂಘದ ಅಧ್ಯಕ್ಷ ಟಿ ಜಗನಾಥ್ ಸೇರಿದಂತೆ ಕಾರ್ಯಕರ್ತರು ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post