ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ತಾಲೂಕಿನ ರಂಗವ್ವನಹಳ್ಳಿ (ಕಡದರಹಳ್ಳಿ) ಗ್ರಾಮದಲ್ಲಿ ಭಾನುವಾರ ರಾತ್ರಿ ಎರಡು ಸಮುದಾಯಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಇಬ್ಬರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ 10 ಜನರ ವಿರುದ್ದ ಚಳ್ಳಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗವ್ವನಹಳ್ಳಿಯ ಒಂದು ಸಮುದಾಯದ ಮಂಜುನಾಥ ಎನ್ನುವವರ ಮೇಲೆ ತಿಪ್ಪೇಶ ಎನ್ನುವವರ ಕಡೆಯವರಿಂದ ಜಾತಿ ನಿಂದನೆ ಮಾಡಲಾಗಿದ್ದು, ಗಲಾಟೆ ಬಿಡಿಸಲು ಹೋದ ತಿಪ್ಪೇಶನ ಪುತ್ರ ಅಂಜನೇಯನ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಗೊಂಡ ಅಂಜನೇಯನನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಹತ್ತು ಜನರ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಸಮುದಾಯದ ಮುಖಂಡರು ಅಗ್ರಹಿಸಿದ್ದಾರೆ.
ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಸ್ಥಳಕ್ಕೆ ಡಿವೈಎಸ್’ಪಿ ಕೆ.ವಿ. ಶ್ರೀಧರ, ವೃತ್ತ ನಿರೀಕ್ಷಕ ನೆಲವಾಗಲು ಮಂಜುನಾಥ್, ಪಿಎಸ್’ಐಗಳಾದ ರಾಘವೇಂದ್ರ, ಮಂಜುನಾಥ್, ಅರ್ಜನ್, ಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post