ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ನಿಗಮದ ಟ್ರೈನಿ ಸಿಬ್ಬಂದಿಗಳ ಮೇಲೆ ಅಧಿಕಾರಿಗಳು ಒತ್ತಡ ಹಾಕಿ ಕರ್ತವ್ಯಕ್ಕೆ ನಿಯೋಜಿಸಿದ್ದರ ಪರಿಣಾಮ ಟ್ರೈನಿ ಬಸ್ ನಿರ್ವಾಹಕರೊಬ್ಬರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.
ಘಟನೆಯ ವಿವರ:
ಪೊಲೀಸ್ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುವ ಬಸ್‌ನ ನಿರ್ವಾಹಕನಾಗಿ ಸತತ ಮೂರು ದಿನಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರೈನಿ ಬಸ್ ಕಂಡಕ್ಟರ್ ಶಿವರಾಜ್ ಬಸ್‌ನಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಈತ ಭರಮಸಾಗರದ ಮೂಲದವರಾಗಿದ್ದು, ಚಳ್ಳಕೆರೆಯ ಬಸ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದಾರೆ. ಒತ್ತಡಕ್ಕೆ ಘಟಕದ ವ್ಯವಸ್ಥಾಪಕರೆ ಕಾರಣ ಎಂದು ದೂರಲಾಗುತ್ತಿದ್ದು, ಈ ವಿಚಾರವಾಗಿ ವ್ಯವಸ್ಥಾಪಕರನ್ನು ಪ್ರಶ್ನಿಸಿದಾಗ, ನಾವು ಯಾರಿಗೂ ಒತ್ತಡ ತಂದಿಲ್ಲ ಎಂದು ಹೇಳಿ ಪ್ರತಿಕ್ರಿಯಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post