ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಗರದ ಐಯುಡಿಪಿ ಲೇಔಟ್ ನಿವಾಸಿ ಮಂಜುನಾಥ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಚೇತನ ಎಂಬಾಕೆ ಜತೆ ಮಂಜುನಾಥ್ ವಿವಾಹವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಚೇತನ ಮಂಜುನಾಥ್‌ಗೆ ಕಿರುಕುಳ ನೀಡುತ್ತಿದ್ದರು ಎಂದು ಮಂಜುನಾಥ್ ಪೋಷಕರು ಆರೋಪಿಸಿದ್ದಾರೆ.
Also read: ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡು
ಜಿಲ್ಲಾಸ್ಪತ್ರೆ ಸಿಟಿ ಸ್ಕ್ಯಾನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೇಲೆ ಚೇತನ ಮಹಿಳಾ ಠಾಣೆಗೆ ದೂರು ನೀಡಿದ್ದರು. ಪತ್ನಿ ದೂರು ನೀಡಿದ ವಿಷಯ ತಿಳಿದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post