ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಮಳೆಯಿಂದಾಗಿ ನೆನೆದಿದ್ದ ಹಳೇ ಮನೆಯ ಗೋಡೆ ರಾತ್ರಿ ಮಲಗಿದ್ದ ಸಮಯದಲ್ಲಿ ಬಾಲಕ ಲೋಹಿತ್ (೩) ಮೇಲೆ ಗೋಡೆ ಕುಸಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಾಲಕನ ಪೋಷಕರಾದ ಓಂಕಾರಪ್ಪ ಹಾಗೂ ಸಾವಿತ್ರಮ್ಮ ಇಬ್ಬರೂ ಘಟನೆ ವೇಳೆ ಬಾಲಕನ ಜತೆಯಲ್ಲಿದ್ದು ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















