ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ದಾವಣಗೆರೆ- ಚಿತ್ರದುರ್ಗ-ತುಮಕೂರು Davamagere-Chitradurga-Tumkur New Train ನೂತನ ಮಾರ್ಗದ ಭೂಸ್ವಾಧೀನಕ್ಕೆ ಅಧಿಕಾರಿಗಳ ತಂಡ ರಚಿಸಿ ಜಂಟಿ ಸರ್ವೇ ಕಾರ್ಯ ಕೈಗೊಂಡು ಮೇ ಅಂತ್ಯದ ವೇಳೆಗೆ ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಅವಕಾಶ ಮಾಡಿಕೊಡುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ಆಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೂತನ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಂದಾಯ, ಭೂಮಾಪನ, ರೈಲ್ವೆ, ಲೋಕೋಪಯೋಗಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡವು ಸರ್ವೇ ನಡೆಸಬೇಕು ಮತ್ತು ಮೇ ಅಂತ್ಯಕ್ಕೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು, ಮೇ ತಿಂಗಳ ಮಧ್ಯದ ವೇಳೆಗೆ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕುಎಂದು ತಿಳಿಸಿದರು.
ಭೂಸ್ವಾಧೀನಕ್ಕೆ ಅಗತ್ಯ ಇರುವ 200 ಕೋಟಿ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
Also read: Pink Toilets in 32 Gram Panchayats of Gadag District in Karnataka
ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಹಿರಿಯೂರು ತಾಲ್ಲೂಕಿಗೆ 77 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದ್ದು, 49 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 183 ಎಕರೆ ಭೂಮಿ ಸ್ವಾಧೀನಕ್ಕೆ ಪರಿಹಾರ ನಿಗದಿಪಡಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಎನ್. ಸತೀಶ್ ಬಾಬು, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಮುರುಳೀಧರ್ ನಾಡಿಗೇರ್, ಭರಮಸಾಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post