ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಿತ್ರದುರ್ಗ ಡಿಎಆರ್ ಪೆರೆಡ್ ಮೈದಾನದಲ್ಲಿ ಎರಡು ದಿನಗಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2022 ನಡೆಯಿತು.
ಜಿಲ್ಲಾಧಿಕಾರಿ ದಿವ್ಯಪ್ರಭು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕ ಪರಶುರಾಮ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ. ಕುಮಾರಸ್ವಾಮಿ, ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಪಾಪಣ್ಣ ಇನ್ನಿತರರು ಉಪಸ್ಥಿತರಿದ್ದರು.
ಎರಡು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿ ಪ್ರಶಸ್ತಿಗೆ ಭಾಜನರಾದರು. ನ.16ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಇಒ ದಿವಕರ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
Also read: ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಕಂಡುಬಂದರೆ ನನಗೆ ತಿಳಿಸಿ, ಕ್ರಮಕೈಗೊಳ್ಳುತ್ತೇನೆ: ಶಾಸಕ ಈಶ್ವರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post