ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಕಾರ್ಖಾನೆಗಳಲ್ಲಿ ಡಿಎಸ್ಎಸ್ ಸೇಫ್ಟಿ ಸಿಸ್ಟಮ್ಸ್ ಅಳವಡಿಸುವ ಮೂಲಕ ಶೂನ್ಯ ಅಪಘಾತ ಸಾಧಿಸಲು ಪ್ರಯತ್ನ ನೆಡೆಯುತ್ತದೆ ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕಿರ್ಲೋಸ್ಕರ್ ಕಾರ್ಖಾನೆ Kirloskar ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ ತಿಳಿಸಿದರು.
ಹಿರಿಯೂರು ತಾಲೂಕಿನ ಪರಮೇನಹಳ್ಳಿ ಗ್ರಾಮದಲ್ಲಿರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮಾರ್ಚ್ 4 ರಿಂದ 10 ರವರೆಗೆ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುರಕ್ಷತೆಗಾಗಿ ಮಾಡಲಾದ ಬದಲಾವಣೆಗಳ ಬಗ್ಗೆ ವಿವರವಾಗಿ ತಿಳಿಸಿದರು.
ಸುರಕ್ಷತಾ ವಿಭಾಗದ ಡೆಪ್ಯೂಟಿ ಮ್ಯಾನೇಜರ್ ಅರಿಹಂತ್ ಮಾತನಾಡಿ, ಉದ್ಯೋಗಿಗಳು, ಕಾರ್ಮಿಕರ ಸಹಕಾರದಿಂದ ಕಾರ್ಖಾನೆಯಲ್ಲಿ ಈಗಾಗಲೇ ಉತ್ತಮ ಸುರಕ್ಷತಾ ವಾತಾವರಣ ಮೂಡಿಸಲು ಪ್ರಯತ್ನ ಮಾಡಲಾಗುತ್ತಿದೆ. 2021ನೇ ಸಾಲಿನಲ್ಲಿ ಎನ್ ಎಸ್ ಸಿ ಬೆಂಗಳೂರು ವತಿಯಿಂದ ಕಾರ್ಖಾನೆಗೆ ಉತ್ತಮ ಸುರಕ್ಷ ಪುರಸ್ಕಾರ ಪ್ರಶಸ್ತಿ ಲಭಿಸಿದ್ದು, ಅಪಘಾತ ರಹಿತ ಕಾರ್ಖಾನೆಯಾಗಲು ಎಲ್ಲರ ಸಹಕಾರದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.
ಸುರಕ್ಷತಾ ದಿನಾಚರಣೆಯನ್ನು ಆಚರಣೆ ಮಾಡುವ ಮುಖ್ಯ ಉದ್ದೇಶ ಜನಸಾಮಾನ್ಯರಿಗೆ, ಕಾರ್ಮಿಕರಿಗೆ ಮತ್ತು ಉದ್ಯೋಗಿಗಳಿಗೆ ಸುರಕ್ಷತೆ ಬಗ್ಗೆ ಅರಿವನ್ನು ಮೂಡಿಸುವುದರ ಮೂಲಕ ಜಾಗೃತಿ ಮೂಡಿಸುವ ಒಂದು ಪ್ರಯತ್ನವಾಗಿದೆ ಮತ್ತು ಕಾರ್ಖಾನೆಗಳಲ್ಲಿ ಅಪಘಾತವನ್ನು ತಗ್ಗಿಸಿ, ಶೂನ್ಯ ಅಪಘಾತಕ್ಕೆ ತರುವ ಉದ್ದೇಶದಿಂದ ಕಂಪನಿಯ ಆವರಣದಲ್ಲಿ ವಿಭಿನ್ನ ರೀತಿಯಲ್ಲಿ ಸುರಕ್ಷತಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಖಾನೆಯ ಆಡಳಿತ ಕಛೇರಿಯ ಮುಂಭಾಗ 52 ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಧ್ವಜಾರೋಹಣ ಮತ್ತು ಪ್ರತಿಜ್ಞೆ ಪಡೆದು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಸುರಕ್ಷತಾ ಸಪ್ತಾಹ ನಿಮಿತ್ತ ದಿನಕ್ಕೊಂದು ಕಾರ್ಯಕ್ರಮ ಏರ್ಪಡಿಸಿ ಕಾರ್ಖಾನೆ ಉದ್ಯೋಗಿಗಳಿಗೆ ಬಹುಮಾನ ನೀಡುವುದರ ಮೂಲಕ ಸುರಕ್ಷತಾ ಅರಿವಿಗೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯೂರು ಪೋಲಿಸ್ ಉಪ ಅಧೀಕ್ಷಕರು ಚೈತ್ರ, ಗ್ರಾಮಾಂತರ ಠಾಣೆ ನಿರೀಕ್ಷಕರು ಕಾಳಿಕೃಷ್ಣ, ಪರಮೇನಹಳ್ಳಿ ಬೀಡುಕಬ್ಬಿಣ ಘಟಕದ ಪ್ಲಾಂಟ್ ಹೆಡ್ ಚಂದ್ರಶೇಖರ್ ಚಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವರದಿ: ಮುರಳಿಧರ್ ನಾಡಿಗೇರ್, ಸುರಕ್ಷತಾ ವಿಭಾಗ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post