ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಚಳ್ಳಕೆರೆ ಬಳಿಯಲ್ಲಿ ಬಸ್’ನಲ್ಲಿ ಸಾಗಿಸಲಾಗುತ್ತಿದ್ದ ದಾಖಲೆಯಿಲ್ಲದ 1.15 ಲಕ್ಷ ರೂಪಾಯಿಯನ್ನು ಪೊಲೀಸರು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು, ಹಣ ಸಾಗಿಸುತ್ತಿದ್ದ ವ್ಯಕ್ತಿ ಅಕ್ಕಿ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಗೋಪಿನಾಥ್ ಎಂದು ತಿಳಿದು ಬಂದಿದೆ.
ಈತ ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದಾಗ ಬಸ್ ನಿಲ್ಲಿಸಿ ತಪಾಸಣೆ ನಡೆಸಿದಾಗ ಪೊಲೀಸರು ಹಣ ವಶಪಡಿಸಿಕೊಂಡಿದ್ದಾರೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Also read: ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್
2ನೇ ಪ್ರಕರಣ
ಇನ್ನೊಂದು ಪ್ರಕರಣದಲ್ಲಿ ನಾಯಕನಹಟ್ಟಿ ಕ್ರಾಸ್ ಬಳಿ ಇರುವ ಚೆಕ್ ಪೋಸ್ಟ್ ಪೊಲೀಸರು ಪರಿಶೀಲಿಸಿ 38 ಲಕ್ಷ ರೂ. ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ವಶಕ್ಕೆ ಪಡೆದ ಹಣವು ಚಳ್ಳಕೆರೆಯ ಬ್ಯಾಂಕ್ ಆಫ್ ಬರೋಡಾದಿಂದ ನಗದೀಕರಿಸಲಾಗಿದೆ ಎಂದು ವರದಿಯಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಯೋಜನೆಗಾಗಿ ಗ್ರಾಮಸ್ಥರು ಬ್ಯಾಂಕಿನಿಂದ ಬಿಡಿಸಿಕೊಂಡು ಬರುವಾಗ ಚೆಕ್ ಪೋಸ್ಟ್ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದು, ತಹಶೀಲ್ದಾರ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















