ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿರುವ ವಿವಾದ ಕಾಂಗ್ರೆಸ್’ನ ಆಂತರಿಕ ವಿಚಾರವಾಗಿದ್ದು, ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ವಿಚಾರ ಅವರ ಪಕ್ಷದ ವಿಚಾರವಾಗಿ ನಾನು ಮಾತಾಡಲ್ಲ. ಸಿದ್ದರಾಮಯ್ಯ, ಡಿಕೆಶಿ ಯಾರು ಬೇಕಾದರೂ ಸಿಎಂ ಆಗಲಿ ಅದು ಅವರ ಆಂತರಿಕ ವಿಚಾರ. ನಮ್ಮ ಮುಖ್ಯಮಂತ್ರಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದಾದ್ಯಂತ ನಾನು ಎರಡು ಮೂರು ಬಾರಿ ಪ್ರವಾಸ ಮಾಡಿದ್ದೇನೆ. ನಾವು ನಮ್ಮ ಪಕ್ಷದ ಸಂಘಟನೆ, ಸಿಎಂ, ಅಧ್ಯಕ್ಷರು ನೀಡಿದ ಜವಾಬ್ದಾರಿಗೆ ಬದ್ಧವಾಗಿದ್ದು, ಮುಂದಿನ ಚುನಾವಣೆಯನ್ನು ನಾವೆಲ್ಲಾ ಒಗ್ಗಟ್ಟಾಗಿ ಮಾಡುತ್ತೇವೆ. ಪ್ರಧಾನಮಂತ್ರಿ, ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನಕ್ಕೆ ಬದ್ಧ. ರಮೇಶ್ ಜಾರಕಿಹೊಳಿ ನನ್ನ ಆತ್ಮೀಯರು. ದೇವೇಂದ್ರ ಫಡ್ನವಿಸ್ ಭೇಟಿ ಬಗ್ಗೆ ಮಾಹಿತಿ ಇಲ್ಲ. ಅವರು ನನಗೆ ಸಂಪರ್ಕಕ್ಕೆ ಸಿಕ್ಕಿಲ್ಲ, ಸಿಕ್ಕಿದ್ರೆ ಮಾತಾಡುತ್ತೇನೆ. ಅರವಿಂದ್ ಬೆಲ್ಲದ್ ಪೋನ್ ಟ್ಯಾಪಿಂಗ್ ವಿಚಾರ ಗೃಹ ಸಚಿವರು ಗಮನಿಸುತ್ತಾರೆ ಎಂದರು.
ನಗರದ ಸರೋಜ ಭಾಯಿ ಕಲ್ಯಾಣ ಮಂಟಪದ ಬಳಿ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನವಾಗಿ ನಿರ್ಮಿಸಿದ ಕಿರು ಉದ್ಯಾನವನ್ನು ಸಸಿ ನೆಡುವ ಮೂಲಕ ಸಚಿವರು ಉದ್ಘಾಟಿಸಿದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದಲ್ಲಿ ನಡೆದಿರುವುದು ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಗರದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್-19 ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಪೋಲೀಸ್ ವರಿಷ್ಟಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ದೇವಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ. ಬದರಿನಾಥ, ಆಯುಕ್ತರಾದ ಸುರೇಶ್ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಇದೇ ವೇಳೆ ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















