ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ Muruga shri ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದಾರೆ.
ಒಂದನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ ಹಾಗೂ ಅವರ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ಕೋರ್ಟ್‌ಗೆ ಸಲ್ಲಿಸಿರುವ ವೈದ್ಯಕೀಯ ವರದಿಯಲ್ಲಿ ನಮೂದಿಸಿದ್ದಾರೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















