ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಿರಿಯೂರು: ಕಲಿಕೆಯಲ್ಲಿ ಉತ್ತಮ ಶ್ರದ್ದೆ ಮತ್ತು ಆಸಕ್ತಿ ಇದ್ದರೆ ಮಾತ್ರ ಸಾಧನೆ ಮಾಡಬಹುದು ಎಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ 10ಲಕ್ಷ ರೂ. ವೆಚ್ಚದಲ್ಲಿ ಶಾಸಕರ ಅನುದಾನದಲ್ಲಿ ನಡೆಯುತ್ತಿರುವ ನೂತನ ರಂಗಮಂದಿರ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿದ ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಶಿಕ್ಷಣದ ಮಹತ್ವದ ಕುರಿತು ಅವರು ಮಾತನಾಡಿದರು.
ಹಿಂದೆ ಭಾರತದಲ್ಲಿ ಗುರುಕುಲ ಶಿಕ್ಷಣ ಪದ್ಧತಿಯಿತ್ತು. ಇದರಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಹೊಣೆ ಶಿಕ್ಷಕರ ಮೇಲಿತ್ತು. ವಿದ್ಯಾರ್ಥಿಗಳು ಗುರುಗಳ ಮನೆಯಲ್ಲಿದ್ದು ವಿದ್ಯಾರ್ಜನೆ ಮಾಡುತ್ತಿದ್ದರು. ಆಚಾರ್ಯ ದೇವೋ ಭವ ಎಂಬ ಗೌರವವು ವಿದ್ಯಾರ್ಥಿಗಳ ಮನದಲ್ಲಿ ಮೂಡಿರುತ್ತಿತ್ತು. ಆಚಾರ್ಯರು ಸ್ವತಃ ಸಾಧನೆ ಮಾಡುತ್ತಿದ್ದರು ಮತ್ತು ಅದೇ ಸಂಸ್ಕಾರವನ್ನು ಅವರು ಮಕ್ಕಳಲ್ಲಿ ಮೂಡಿಸುತ್ತಿದ್ದರು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಆಶ್ರಮದ ವಾತಾವರಣದ ಲಾಭ ಆಗುತ್ತಿತ್ತು. ಈಗಿನ ಶಿಕ್ಷಣದಲ್ಲಿ ತುಂಬಾ ಬದಲಾವಣೆಯನ್ನು ಕಾಣುತ್ತಿದ್ದೆವೆ. ಹೆಚ್ಚು ಮೊಬೈಲ್ ಬಳಕೆ ಶಿಕ್ಷಣಕ್ಕೆ ಹಿನ್ನೆಡೆಯಾಗುತ್ತಿದೆ. ಮೊಬೈಲ್ ಉಪಯೋಗದಿಂದ ಎಷ್ಟು ಅನುಕೂಲವಿದೆಯೋ ಅಷ್ಟೇ ಮಾರಕವಾಗಿದೆ. ಕಲಿಕೆಯಲ್ಲಿ ಉತ್ತಮ ಶ್ರದ್ದೆ ಮತ್ತು ಆಸಕ್ತಿ ಇದ್ದರೆ ಮಾತ್ರ ಸಾಧನೆ ಮಾಡಬಹುದು ಎಂದರು.
ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜೀನ ಪ್ರಾಂಶುಪಾಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾಥಿಗಳು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post