ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ನಟ ದರ್ಶನ್ #Darshan ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ #Supreme Court ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೀರ್ಪು ಏನಾಗುತ್ತೋ ಎಂಬ ಆತಂಕ ಇತ್ತು. ಜಾಮೀನು ರದ್ದಿನಿಂದ ಕಾನೂನಿನ ಮೇಲೆ ನಂಬಿಕೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರಿಂ ಕೋರ್ಟ್‌ನಿಂದ ನ್ಯಾಯ ಸಾಭೀತಾಗಿದೆ. ಮಗನ ಕಳೆದುಕೊಂಡು ಆತಂಕದಲ್ಲಿದ್ದೆವು. ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ. ಸರ್ಕಾರ, ನ್ಯಾಯಾಂಗವನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post