ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ಅಕ್ರಮ ಲೇಔಟ್ ನಿರ್ಮಾಣ ಮಾಡಿರುವ ದಾಖಲೆಗಳು ಸಿಕ್ಕರೆ ಅಂತಹ ದಂಧೆಕೋರರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿರುವ ಅವರು, ಅಕ್ರಮ ಲೇಔಟ್’ಗಳು ನಿರ್ಮಾಣವಾಗಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿ. ಇದು ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಇನ್ನು, ಚಿತ್ರದುರ್ಗ ರಿಂಗ್ ರಸ್ತೆ ಅಭಿವೃದ್ಧಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಯುಜಿಡಿ ಕಾಮಗಾರಿ ಸಂಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















