ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಿತ್ರದುರ್ಗದಲ್ಲಿ ನಡೆದ ಆರು ಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿತ್ಯಾನಂದ ( ದಿಗ್ವಿಜಯ ನ್ಯೂಸ್) ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಫೈನಲ್ ಗೆದ್ದು ಚಾಂಪಿಯನ್ ಆಗಿದೆ.
ಫೈನಲ್ ನಲ್ಲಿ ದಾವಣಗೆರೆ ಪತ್ರಕರ್ತರ ತಂಡದ ವಿರುದ್ಧ ರೋಚಕ ಆಟವಾಡಿದ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ತಂಡವು ಜಯ ಸಾಧಿಸಿ 25 ಸಾವಿರ ರೂ. ನಗದು ಮತ್ತು ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ವಿ ಟಿ, ಕಾರ್ಯದರ್ಶಿ ಸೋಮನಾಥ್ ತಂಡವನ್ನು ನಿರ್ವಹಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಶಾಖೆಯು ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯವಹಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post