ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಸೂಕ್ತ ಸಮಯದಲ್ಲಿ ಸರಿಯಾದ ತರಬೇತಿ ಸಿಕ್ಕರೆ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ವಿಜ್ಞಾನಿಗಳಾಗುತ್ತಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು .
ನಗರದ ಅಜ್ಜಯ್ಯನಗುಡಿ ರಸ್ತೆಯಲ್ಲಿರುವ ಸ್ವಾಮಿ ವಿವೇಕನಂದ ಪ್ರೌಡಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಸೋಷಿಯಲ್ ಹೆಲ್ಪರ್ ಸರೋಜಮ್ಮ ಇವರ ವತಿಯಿಂದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದ ಉದ್ಘಾಟಸಿ ಅವರು ಮಾತನಾಡಿದರು.
ನಿರಂತರ ಪರಿಶ್ರಮ ಮತ್ತು ಶ್ರದ್ದೆ ಇದ್ದರೆ, ಉತ್ತಮ ಗುರಿ ಸಾಧಿಸಬಹುದು. ಚಳ್ಳಕೆರೆ ಇಂದು ವಿಜ್ಞಾನ ನಗರವಾಗಿ ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯರೇ ಹೆಚ್ಚಿನ ಪ್ರಮಾಣದಲ್ಲಿ ವಿಜ್ಞಾನಿಗಳಾಗಬಹುದೇನೂ ಎಂದು ಆಶಯ ವ್ಯಕ್ತಪಡಿಸಿದರು.
ಇಂಜನೀಯರ್ ಕಾಲೇಜು ನಿರ್ಮಾಣ ಹಂತದಲ್ಲಿದ್ದು, ಶೀಘ್ರದಲ್ಲಿ ಪ್ರಾರಂಭವಾಗಲಿದೆ. ಹಾಗೂ ಯುವಕರಿಗೆ ಡಿಟಿಡಿಸಿ ಕೇಂದ್ರ ಉದ್ಘಾನೆಗೊಳಲಿದೆ ಎಂದು ಶಾಸಕರು ಹೇಳಿದರು.
ಕೆ.ಸಿ.ರೆಡಿ ಸೊಶಿಯಲ್ ಹೆಲ್ಪರ್ ಸೂಸೈಟಿ ಕಾರ್ಯದರ್ಶಿ ವಸಂತ ಶ್ರೀಕರ ರೆಡ್ಡಿ ಮಾತನಾಡಿ, ಪಠ್ಯ ಪುಸ್ತಕಗಳನ್ನು ಅಧ್ಯಯನ ಮಾಡಿ ಪರೀಕ್ಷೆ ಬರೆಯುವುದಕ್ಕಷ್ಟೇ ಮಕ್ಕಳನ್ನು ಸೀಮಿತಗೊಳಿಸದೇ, ಅವರಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ ಎಂದರು.
ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ, ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸುವುದು ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಸಹಾಯಕವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಾವಯವ ಕೃಷಿ ಯಂತ್ರದ ಮಾದರಿ, ಸ್ವಯಂ ಚಾಲಿತ ದೀಪ ನಿರ್ವಹಣೆ, ಸಾರಿಗೆ ವ್ಯವಸ್ಥೆ ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ವಸ್ತುಗಳನ್ನು ಪ್ರದರ್ಶಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪ್ರಕಾಶ ಮೂರ್ತಿ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ನಗರಸಭೆ ಸದಸ್ಯೆ ಸುಜಾತ, ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ, ವಸಂತ, ಪ್ರಮೀಳಾ, ಶಿಕ್ಷಣ ಇಲಾಖೆಯ ಪರಿವಿಕ್ಷಕ ಶ್ರೀನಿವಾಸ್, ಬಿ.ವಿ. ನಾಥ, ಈಶ್ವರಪ್ಪ, ಮುಖ್ಯೋಪಾಧ್ಯಾಯ ವೀರಭದ್ರಯ್ಯ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post